ಕೊಪ್ಪ: ಬಾಲಕಿಯ ಅತ್ಯಾಚಾರ ಆರೋಪಿ ಬಾಲಾಪರಾಧಿ
Update: 2018-04-08 19:42 IST
ಚಿಕ್ಕಮಗಳೂರು, ಎ.8: ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಲ್ಲಗದ್ದೆ ಸಮೀಪದ ಕೆಸಗೋಡಿನಲ್ಲಿ ಶನಿವಾರ ಮಧ್ಯಾಹ್ನ ಶಾಲೆ ಮುಗಿಸಿ ಮನೆಗೆ ಹಿಂತಿರುಗುತಿದ್ದ ಅಪ್ರಾಪ್ತ ಶಾಲಾ ಬಾಲಕಿಯ ಅತ್ಯಾಚಾರ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಯುವಕ ಬಾಲಾಪರಾಧಿಯಾಗಿದ್ದು, ಆರೋಪಿ ವಿರುದ್ಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಕಲಂ 201, 302, 363, 376 ಐಪಿಸಿ ಕಲಂ 4,6,8 ಮತ್ತು 12 ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಆರೋಪಿಯನ್ನು ಬಾಲಾಪರಾಧಿ ನ್ಯಾಯಲಯದ ಮುಂದೆ ಹಾಜರುಪಡಿಸಲಾಗವುದು ಎಂದು ಜಿಲ್ಲಾ ಪೊಲೀಸ್ ಇಲಾಖೆಯ ಪ್ರಕಟನೆ ತಿಳಿಸಿದ್ದು, ಮೃತ ಬಾಲಕಿಯ ಕುಟುಂಬಕ್ಕೆ ಸರಕಾರದಿಂದ ಮತ್ತು ನೊಂದವರ ಪರಿಹಾರ ಯೋಜನೆಯಡಿಯಲ್ಲಿ ಸೂಕ್ತ ನೆರವು ಪರಿಹಾರ ನೀಡಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದೆ.