ಹೆಣ್ಣು ಮಗು ಜನಿಸಿದ್ದಕ್ಕೆ ಪತ್ನಿಗೆ ಆ್ಯಸಿಡ್ ಎರಚಿದ ಪತಿ !

Update: 2018-04-08 16:29 GMT

ಮುಝಾಫರ್‌ನಗರ, ಎ. 8: ವರದಕ್ಷಿಣೆ ಆಗ್ರಹ ಈಡೇರಿಸದ ಹಾಗೂ ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿಗೆ ಪತಿ ಆ್ಯಸಿಡ್ ಎರಚಿದ ಘಟನೆ ಚಂದುರಾ ಗ್ರಾಮದಲ್ಲಿ ಶನಿವಾರ ನಡೆದಿದೆ.

ಆ್ಯಸಿಡ್ ದಾಳಿಗೆ ಒಳಗಾದ ಮಹಿಳೆ ಕೋಮಲ್ ಆರ್‌ಪಿಎಫ್ ಸಿಬ್ಬಂದಿಯಾಗಿದ್ದು, ದಿಲ್ಲಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತಿ ಕಪಿಲ್ ಕುಮಾರ್ ದಿಲ್ಲಿಯ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಪತಿಯೊಂದಿಗಿನ ವಿವಾದದ ಬಳಿಕ ಕೋಮಲ್ ಹೆತ್ತವರೊಂದಿಗೆ ವಾಸಿಸುತ್ತಿದ್ದಾರೆ ಎಂದು ಸರ್ಕಲ್ ಆಫಿಸರ್ ಎಸ್.ಕೆ.ಎಸ್. ಪ್ರತಾಪ್ ಹೇಳಿದ್ದಾರೆ.

ಕುಮಾರ್ ಶನಿವಾರ ಅತ್ತೆ ಮನೆಗೆ ತೆರಳಿ ಪತ್ನಿಯನ್ನು ಭೇಟಿಯಾಗಲು ಪ್ರಯತ್ನಿಸಿದ್ದಾರೆ. ಆದರೆ, ಅಲ್ಲಿ ವಾಗ್ವಾದ ನಡೆದಿದೆ. ಈ ಸಂದರ್ಭ ಕುಮಾರ್ ಆ್ಯಸಿಡ್ ಎರಚಿದ್ದಾರೆ. ಗಾಯಗೊಂಡ ಕೋಮಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಪರಿಸ್ಥಿತಿ ಚಿಂತಾಜನಕವಾಗಿ ಎಂದು ಪೊಲೀಸರು ತಿಳಿಸಿದ್ದಾರೆ. ಕೋಮಲ್ ಪತಿ ಹಾಗೂ ಆತನ ತಾಯಿ ವರದಕ್ಷಿಣೆಗಾಗಿ ಮಗಳಿಗೆ ಕಿರುಕುಳ ನೀಡುತ್ತಿದ್ದರು. 2016ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದರು ಎಂದು ಕೋಮಲ್ ಅವರ ಹೆತ್ತವರು ಆರೋಪಿಸಿರುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡು, ಕುಮಾರ್‌ನನ್ನು ಬಂಧಿಸಲು ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News