×
Ad

ಕೊಳ್ಳೇಗಾಲ: ಬಿಜೆಪಿ ವತಿಯಿಂದ ಬೈಕ್ ರ‍್ಯಾಲಿ

Update: 2018-04-09 17:29 IST

ಕೊಳ್ಳೇಗಾಲ,ಏ.09: ಕಾಂಗ್ರೆಸ್ ದುರಾಡಳಿತದ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಹನೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಪ್ರೀತಂ ನಾಗಪ್ಪರವರು ತಿಳಿಸಿದರು. 

ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಇಂದು ಹಮ್ಮಿಕೊಂಡಿದ್ದ ನವಕರ್ನಾಟಕ ನಿರ್ಮಾಣಕ್ಕಾಗಿ ಕರುನಾಡ ಯುವ ಜಾಗೃತಿ ಯಾತ್ರೆಯ ಬೈಕ್‍ರ್ಯಾಲಿಗೆ ಚಾಲನೆ ನೀಡಿ ನಂತರ ಅವರು ಮಾತನಾಡಿದರು.

ನಮ್ಮ ಕ್ಷೇತ್ರದಲ್ಲಿ ಯುವಕರು ಹೆಚ್ಚಿನ ಮಟ್ಟದಲ್ಲಿ ಸ್ವಯಂ ಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಬೈಕ್ ರ್ಯಾಲಿಗೆ ಭಾಗವಹಿಸುವ ಮೂಲಕ ಕಾಂಗ್ರೆಸ್ ಸರ್ಕಾರ ವೈಫಲ್ಯತೆಗಳ ಜಾರ್ಜ್‍ಶೀಟ್‍ನ್ನು ಕ್ಷೇತ್ರದಲ್ಲಿ ಪ್ರತಿ ಮನೆಮನೆಗೆ ತೆರಳಿ ನೀಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತಗೊಳಿಸಲು ಮುಂದಾಗಿದ್ದೇವೆ ಎಂದರು. 

ಜೊತೆಗೆ ಕೇಂದ್ರದ ಬಿಜೆಪಿ ಸರ್ಕಾರದ ಯೋಜನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಜಯಭೇರಿ ಬಾರಿಸಿ, ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದರು.

ಬೈಕ್ ರ್ಯಾಲಿಯಲ್ಲಿ ಹನೂರು ಕ್ಷೇತ್ರ ಅಧ್ಯಕ್ಷ ವೃಷಬೇಂದ್ರಸ್ವಾಮಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಶಾಂತ್, ಮಹೇಶ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ನಾಗಲಕ್ಷ್ಮೀ, ಯುವ ಮುಖಂಡರಾದ ಮಂಗಲಪ್ರಕಾಶ್, ವರಪ್ರಸಾದ್, ಕಾಮಗೆರೆ ಮಲ್ಲಪ್ಪ, ಚೇತನ್, ಆನಂದ್, ಮಹೇಶ್, ಪ್ರಸನ್ನ, ಕುಮಾರ, ಸ್ವಾಮಿ, ಜಗದೀಶ್ ಹಾಗೂ ಇನ್ನಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News