ಚಿಕ್ಕಮಗಳೂರು: ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ
Update: 2018-04-09 17:45 IST
ಚಿಕ್ಕಮಗಳೂರು,ಎ.09: ಸಿಡಿಲಿನ ಆರ್ಭಟಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಮೂಡಿಗೆರೆ ತಾಲೂಕಿನ ಕಳಸ ನಗರದಲ್ಲಿ ನಡೆದಿದೆ.
ಕಳಸ ಸುತ್ತಮುತ್ತ ಭಾರಿ ಗುಡುಗು-ಸಿಡಿಲಿನೊಂದಿಗೆ ಮಳೆಯಾಗಿದ್ದು, ಈ ವೇಳೆ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಸುಮಾರು ಹೊತ್ತು ಸುರಿದ ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.