ಕೇಸರಿ ಬಣ್ಣದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿದ ಆದಿತ್ಯನಾಥ್ ಸರಕಾರ!
Update: 2018-04-09 19:42 IST
ಲಕ್ನೋ, ಎ.9: ಉತ್ತರ ಪ್ರದೇಶ ಸರಕಾರವು ಬುದೌನ್ ಗ್ರಾಮದಲ್ಲಿ ಸ್ಥಾಪಿಸಿರುವ ಕೇಸರಿ ಬಣ್ಣದ ಅಂಬೇಡ್ಕರ್ ಪ್ರತಿಮೆ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.
ಕೆಲ ದಿನಗಳ ಹಿಂದೆ ದುಷ್ಕರ್ಮಿಗಳು ಅಂಬೇಡ್ಕರ್ ಪ್ರತಿಮೆಯನ್ನು ದ್ವಂಸಗೈದಿದ್ದು, ಇದೇ ಸ್ಥಳದಲ್ಲಿ ಹೊಸ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಆಗ್ರಾದಿಂದ ತಂದ ಈ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.
ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಕಚೇರಿಯಾದ ಲಾಲ್ ಬಹದ್ದೂರ್ ಶಾಸ್ತ್ರಿ ಭವನಕ್ಕೆ ಕೇಸರಿ ಬಣ್ಣ ಬಳಿಯಲಾಗಿತ್ತು. ಇಷ್ಟೇ ಅಲ್ಲದೆ ಹಜ್ ಸಮಿತಿ ಭವನಕ್ಕೂ ಕೇಸರಿ ಬಣ್ಣ ಬಳಿಯಲಾಗಿತ್ತು.