ರಾಜ್ಯಾದ್ಯಂತ ಮಿಂಚಿನ ನೋಂದಣಿ ಅಭಿಯಾನ: 6.45 ಲಕ್ಷ ಅರ್ಜಿ ಸ್ವೀಕಾರ

Update: 2018-04-09 15:47 GMT

ಬೆಂಗಳೂರು, ಎ.9 : ಮತದಾರರ ಪಟ್ಟಿಯಲ್ಲಿ ಹೊಸದಾಗಿ ನೋಂದಣಿ ಮತ್ತು ಬದಲಾವಣೆಗಳನ್ನು ಮಾಡಿಕೊಳ್ಳಲು ಅನುವಾಗುವಂತೆ ಭಾರತೀಯ ಚುನಾವಣಾ ಆಯೋಗ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಮಿಂಚಿನ ನೋಂದಣಿ ಅಭಿಯಾನಕ್ಕೆ ನಿರೀಕ್ಷೆಗೂ ಮೀರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 6.45 ಲಕ್ಷ ಅರ್ಜಿ ಸ್ವೀಕಾರಗೊಂಡಿವೆ.

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಮೇ 12 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಯೋಗವು ನೂತನ ಮತದಾರರು ಮತಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅನುವಾಗುವಂತೆ ಎ.8 ರಂದು ಮಿಂಚಿನ ನೋಂದಣಿ ಅಭಿಯಾನವನ್ನು ರಾಜ್ಯದಾದ್ಯಂತ ಹಮ್ಮಿಕೊಂಡಿತ್ತು.

ರಾಜ್ಯದ 30 ಜಿಲ್ಲೆಗಳಿಂದಲೂ ಈ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, 4.90 ಲಕ್ಷಕ್ಕೂ ಅಧಿಕ ಫಾರಂ -6 ಸ್ವೀಕರಿಸಲಾಗಿದೆ. ಒಟ್ಟಾರೆಯಾಗಿ 6.45 ಲಕ್ಷ ಅರ್ಜಿಗಳು ಸ್ವೀಕೃತಗೊಂಡಿದ್ದು, ಅದರಲ್ಲಿ 1.30 ಲಕ್ಷಕ್ಕೂ ಹೆಚ್ಚಿನ ಅರ್ಜಿಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವೀಕಾರಗೊಂಡಿವೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News