×
Ad

ಕೆಪಿಸಿಸಿ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಗೂಳಿಗೌಡ ನೇಮಕ

Update: 2018-04-09 22:21 IST

ಬೆಂಗಳೂರು, ಎ. 9: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿಯನ್ನಾಗಿ ದಿನೇಶ್ ಗೂಳಿಗೌಡ ಅವರನ್ನು ನೇಮಕ ಮಾಡಿ ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ತಮಗೆ ನೀಡಿರುವ ಈ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ಸೂಚನೆ ಹಾಗೂ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ಪಕ್ಷ ಸಬಲೀಕರಣಕ್ಕೆ ತಮ್ಮನ್ನು ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಶ್ರಮಿಸಬೇಕೆಂದು ಶಿವಕುಮಾರ್ ಸಲಹೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News