ಅಭ್ಯರ್ಥಿಯಿಂದ ಅನಂತ್ ಕುಮಾರ್‌ಗೆ 2 ಕೋಟಿ ರೂ. ಕಿಕ್‌ಬ್ಯಾಕ್ ಆರೋಪ: ಸೂಕ್ತ ತನಿಖೆಗೆ ಕಾಂಗ್ರೆಸ್ ಸಮಿತಿ ಒತ್ತಾಯ

Update: 2018-04-10 13:13 GMT

ಬೆಂಗಳೂರು, ಎ.10: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉದಯ್ ಗರುಡಾಚಾರ್ ಕೇಂದ್ರ ಸಚಿವ ಅನಂತ್‌ಕುಮಾರ್‌ಗೆ 2ಕೋಟಿ ರೂ. ಕಿಕ್‌ಬ್ಯಾಕ್ ನೀಡಿರುವ ಬಗ್ಗೆ ಬಿಜೆಪಿ ನಾಯಕ ಎನ್.ಆರ್.ರಮೇಶ್ ಆರೋಪಿಸಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿಗಳು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜಾಜಿನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಕಮಿಟಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಒತ್ತಾಯಿಸಿದ್ದಾರೆ.

ಈ ಕುರಿತು ರಾಜಾಜಿನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶೇಖರ್ ಮಾತನಾಡಿ, ಕೇಂದ್ರ ಸಚಿವ ಅನಂತ್ ಕುಮಾರ್ 2 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿರುವ ಬಗ್ಗೆ ಬಿಜೆಪಿ ನಾಯಕ ಎನ್.ಆರ್.ರಮೇಶ್ ಪತ್ರಿಕಾಗೋಷ್ಟಿ ನಡೆಸಿ ಆರೋಪಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ಚುನಾವಣಾ ಆಯೋಗ ಗಂಭೀರವಾಗಿ ತೆಗೆದುಕೊಳ್ಳಬೇಕೆಂದು ಒತ್ತಾಯಿಸಲಾಗಿದೆ ಎಂದರು.

ಪ್ರತಿ ಅಭ್ಯರ್ಥಿಯ ಚುನಾವಣಾ ವೆಚ್ಚವನ್ನು 28 ಲಕ್ಷ ರೂ.ಗೆ ಮಿತಿಗೊಳಿಸಲಾಗಿದೆ. ಈಗಾಗಲೆ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಈಗಿರುವಾಗ ಕೇಂದ್ರ ಸಚಿವ ಅನಂತ್ ಕುಮಾರ್ 2 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದ್ದಾರೆಂದು ಬಿಜೆಪಿ ನಾಯಕರೇ ಆರೋಪಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸುವ ಅಗತ್ಯವಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News