ಹಾರಿಸ್ ಪುತ್ರ ನಲಪಾಡ್ ಹಲ್ಲೆ ಪ್ರಕರಣ: ಸಚಿವ ಮಹದೇವಪ್ಪ ಪುತ್ರನ ವಿಚಾರಣೆ
Update: 2018-04-10 20:18 IST
ಬೆಂಗಳೂರು, ಎ.10: ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಶಾಸಕ ಹಾರಿಸ್ ಪುತ್ರ ಮುಹಮ್ಮದ್ ನಲಪಾಡ್ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಲೋಕೋಪಯೋಗಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್‌ನನ್ನು ವಿಚಾರಣೆ ನಡೆಸಿದ್ದಾರೆ.
ಫೆ.17ರಂದು ನಗರದ ಫರ್ಜಿ ಕೆಫೆಯಲ್ಲಿ ನಲಪಾಡ್, ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಹಲ್ಲೆ ನಡೆದ ವೇಳೆ ಸಚಿವರ ಪುತ್ರ ಸುನೀಲ್ ಬೋಸ್ ಸ್ಥಳದಲ್ಲಿದ್ದರು ಎನ್ನುವ ಮಾಹಿತಿ ಸಿಸಿಟಿವಿಯಲ್ಲಿ ಸೆರೆಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖಾಧಿಕಾರಿ ಅಶ್ವಥ್‌ಗೌಡ ಸುನಿಲ್ ಬೋಸ್ ಅವರ ವಿಚಾರಣೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.
ಮಂಗಳವಾರ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕೇಂದ್ರ ಕಚೇರಿಯಲ್ಲಿ ಸುನೀಲ್ ಬೋಸ್ ಅವರ ವಿಚಾರಣೆಯನ್ನು ನಡೆಸಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಲವು ಪ್ರಶ್ನೆಗಳನ್ನು ಕೇಳಿರುವುದಾಗಿ ತಿಳಿದುಬಂದಿದೆ.