×
Ad

ಬೆಂಗಳೂರು: ಕಸಗುಡಿಸಲು ರಸ್ತೆಗಿಳಿಯಲಿವೆ ಎಲೆಕ್ಟ್ರಿಕ್ ವಾಹನಗಳು

Update: 2018-04-10 21:21 IST

ಬೆಂಗಳೂರು, ಎ.10: ಬೃಹತ್ ಬೆಂಗಳೂರು ಮಹಾನಗರ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಇದೇ ಪ್ರಥಮ ಬಾರಿಗೆ ನಗರದಲ್ಲಿ ಕಸ ಗುಡಿಸಲು ಎಲೆಕ್ಟ್ರಿಕ್ ವಾಹನ ಬಳಸಿ ನಗರ ಸ್ವಚ್ಛಗೊಳಿಸಲು ಮುಂದಾಗಿದೆ. ಇದಕ್ಕಾಗಿ ಬಿಬಿಎಂಪಿ ಬೆಲ್ಜಿಯಂನಿಂದ ಖರೀದಿಸಿರುವ ಕಸ ಗುಡಿಸುವ 2 ಎಲೆಕ್ಟ್ರಿಕ್ ವಾಹನಗಳನ್ನು ಪ್ರಾಯೋಗಿಕವಾಗಿ ರಸ್ತೆಗಿಳಿಸಿದೆ.

ಎಲೆಕ್ಟ್ರಿಕ್ ವಾಹನಗಳು ಟೆಂಡರ್ ಶ್ಯೂರ್ ರಸ್ತೆಗಳಲ್ಲಿ ಕನಿಷ್ಟ 3 ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸಲಿವೆ. ಇದಕ್ಕಾಗಿ, ಸೇಂಟ್ ಮಾರ್ಕ್ ರಸ್ತೆ, ವಿಠ್ಠಲ ಮಲ್ಯ ರಸ್ತೆ ಸೇರಿ ಇನ್ನಿತರೆ ರಸ್ತೆಗಳನ್ನು ಗುರುತಿಸಲಾಗಿದೆ.

ಈಗಾಗಲೇ ರಸ್ತೆ ಕಸ ಸ್ವಚ್ಛತೆಗಾಗಿ 8 ವಾಹನಗಳನ್ನು ಖರೀದಿಸಿ, ಅವುಗಳಿಂದ ಪ್ರಮುಖ ರಸ್ತೆಗಳನ್ನು ಈಗಾಗಲೇ ಗುಡಿಸಲಾಗುತ್ತಿದೆ. ಆದರೆ, ಅವುಗಳ ಜೊತೆಗೆ ಮತ್ತೆ 34 ಎಲೆಕ್ಟ್ರಿಕ್ ವಾಹನ ಖರೀದಿಗೆ ಮುಂದಾಗಿರುವ ಬಿಬಿಎಂಪಿ ಪ್ರಾಯೋಗಿಕವಾಗಿ 2 ವಾಹನಗಳನ್ನು ಬಳಸಲಿದೆ. ಅವು ಸಮರ್ಪಕವಾಗಿ ಕಾರ್ಯನಿರ್ವಹಿಸಿದರೆ, ಇನ್ನುಳಿದ ವಾಹನಗಳನ್ನು ಖರೀದಿಸಲು ನಿರ್ಧರಿಸಿದೆ.

ಎಲೆಕ್ಟ್ರಿಕ್ ವಾಹನಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ, ಈ ಹಿಂದೆಯೇ ಖರೀದಿಸಿದ್ದ ಕಂಪನಿಯ ವಾಹನಗಳನ್ನು ಖರೀದಿಸಿ ರಸ್ತೆಗಿಳಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಸದ್ಯ ಈ 2 ವಾಹನಗಳನ್ನು ಬೆಲ್ಜಿಯಂನ ಖಾಸಗಿ ಸಂಸ್ಥೆಯಿಂದ ತರಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News