ಎ. 14: ಅಂಬೇಡ್ಕರ್ ಜನ್ಮದಿನೋತ್ಸವ
Update: 2018-04-10 21:44 IST
ಉಡುಪಿ, ಎ.10: ಜಿಲ್ಲಾಡಳಿತ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲೆಯ ದಲಿತ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 127ನೇ ಜನ್ಮದಿನೋತ್ಸವ ಆಚರಣೆ ಎ.14ರಂದು ಬೆಳಗ್ಗೆ 10:30ಕ್ಕೆ ಆದಿಉಡುಪಿಯ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆ ವಹಿಸಲಿದ್ದಾರೆ.
ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಜೀವನದ ಬಗ್ಗೆ ಮಂಗಳೂರು ಬೊಕ್ಕಪಟ್ಣ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ.ವಾಸುದೇವ ಬೆಳ್ಳೆ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.