‘ಕಾರುಣ್ಯ ಸೌಹಾರ್ದ ಕ್ರೆಡಿಟ್ ಸಹಕಾರಿ ನಿ.’ ಹಣಕಾಸು ಸಂಸ್ಥೆ ಉದ್ಘಾಟನೆ
ಮಂಗಳೂರು, ಎ. 10: ‘ಕಾರುಣ್ಯ ಸೌಹಾರ್ದ ಕ್ರೆಡಿಟ್ ಸಹಕಾರಿ ನಿ.’ ಹಣಕಾಸು ಸಂಸ್ಥೆಯ ನೂತನ ಕಚೇರಿಯು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಸಿಟಿ ವಾಕ್ ಕಮರ್ಷಿಯಲ್ ಸಂಕೀರ್ಣದ ಮೊದಲ ಅಂತಸ್ತಿನಲ್ಲಿ ಮಂಗಳವಾರ ಉದ್ಘಾಟನೆಗೊಂಡಿತು.
ಬೋಳಂಗಡಿ ಹವ್ವಾ ಜುಮಾ ಮಸೀದಿಯ ಖತೀಬ್ ಮೌಲಾನ ಯಹ್ಯಾ ತಂಙಳ್ ಮದನಿ ಉದ್ಘಾಟನೆಯನ್ನು ನೆರವೇರಿಸಿದರು.
ಉದ್ಘಾಟನಾ ಕಾರ್ಯಕ್ರಮದ ಬಳಿಕ ನಗರ ಪುರಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಕ್ಫ್ ಬೋರ್ಡ್ ಜಿಲ್ಲಾಧ್ಯಕ್ಷ ಹಾಜಿ ಕಣಚ್ಚೂರ್ ಮೋನು, ಇಸ್ಲಾಮಿಕ್ ಸ್ಟಡೀಸ್ ರಿಸರ್ಚ್ ಯೆನೆಪೊಯ ವಿವಿ ಇದರ ಮುಖ್ಯಸ್ಥ ಡಾ.ಜಾವಿದ್ ಜಮೀಲ್, ಯುನಿಟಿ ಹೆಲ್ತ್ ಕಾಂಪ್ಲೆಕ್ಸ್‌ನ ನಿರ್ದೇಶಕ ಡಾ. ಹಬೀಬ್ ರಹ್ಮಾನ್, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಅಧ್ಯಕ್ಷ ಹಾಜಿ ಎಸ್.ಎಂ.ರಶೀದ್, ಮಂಗಳೂರು ವಿವಿಯ ಬುಸಿನೆಸ್ ಅಡ್ಮಿನಿಸ್ಟ್ರೇಶನ್ ವಿಭಾಗದ ಪ್ರೊಫೆಸರ್ ಡಾ.ಟಿ.ಮಲ್ಲಿಕಾರ್ಜುನಪ್ಪ, ಮಂಗಳೂರು ವಿವಿ ರಿಜಿಸ್ಟ್ರಾರ್ ಪ್ರೊ.ಎ.ಎಂ.ಖಾನ್, ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಉಪಾಧ್ಯಕ್ಷ ಪಿ.ಬಿ.ಅಬ್ದುಲ್ ಹಮೀದ್, ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಇದರ ಕಾರ್ಯದರ್ಶಿ ಕೆ.ಎಂ.ಅಶ್ರಫ್ ಉಪಸ್ಥಿತರಿದ್ದರು.
ಕಾರುಣ್ಯ ಸೌಹಾರ್ದ ಕ್ರೆಡಿಟ್ ಸಹಕಾರಿ ನಿಯಮಿತ ಇದರ ಅಧ್ಯಕ್ಷ ಮುಹಮ್ಮದ್ ಕುಂಞಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಬೆಂಗ್ರೆ ಕಸಬ ಎ.ಆರ್.ಕೆ. ಸ್ಕೂಲ್‌ನ ಅಧ್ಯಾಪಕ ಅಬ್ದುಲ್ಲತೀಫ್ ಆಲಿಯಾ ಕುರ್‌ಆನ್ ಪಠಿಸಿದರು. ಆಸಿಫ್ ಇಕ್ಬಾಲ್ ಕಾರ್ಯಕ್ರಮ ನಿರೂಪಿಸಿದರು.