ದಾವಣಗೆರೆ: ನೀತಿ ಸಂಹಿತೆ ಉಲ್ಲಂಘನೆ; ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವಿರುದ್ಧ ದೂರು ದಾಖಲು
Update: 2018-04-10 23:15 IST
ದಾವಣಗೆರೆ,ಎ.10: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವಿರುದ್ಧ ಚುನಾವಣಾ ಅಧಿಕಾರಿಗಳು ದೂರು ದಾಖಲು ಮಾಡಿದ್ದಾರೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕುಳಗಟ್ಟೆ ಗ್ರಾಮದಲ್ಲಿ ಮುಷ್ಠಿ ಧಾನ್ಯ ಸಂಗ್ರಹ ಕಾರ್ಯಕ್ರಮ ಮಾಡುತ್ತಿದ್ದು, ಈ ಬಗ್ಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ದೂರು ದಾಖಲಾಗಿದೆ.
ಇಂದು ದಾವಣಗೆರೆ ತಾಲೂಕಿನ ಕೈದಾಳೆ ಗ್ರಾಮದಲ್ಲಿ ಪರವಾನಿಗೆ ಪಡೆಯದೆ ಗ್ರಾಮಸ್ಥರಿಗೆ ಊಟ ಹಾಕಿಸಿದ್ದರಿಂದ ಚುನಾವಣಾ ಅಧಿಕಾರಿಗಳು ಬಿಜೆಪಿ ನಾಯಕ ಜಿ.ಎಂ ಸಿದ್ಧೇಶ್ವರ ಹಾಗೂ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾದವ್ ವಿರುದ್ಧ ದೂರು ದಾಖಲು ಮಾಡಿದ್ದರು. ನಂತರ ಇದೀಗ ಎಂ.ಪಿ ರೇಣುಕಾಚಾರ್ಯ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಕ್ಕೆ ದೂರು ದಾಖಲಿಸಲಾಗಿದೆ.