ಮುರ್ಡೇಶ್ವರ ಆರ್.ಎನ್.ಎಸ್. ಪಾಲಿಟೆಕ್ನಿಕ್‌ನಲ್ಲಿ ಕ್ರೀಡಾ ಸಾಂಸ್ಕೃತಿಕ ಹಬ್ಬ
ಭಟ್ಕಳ, ಎ. 10: ಮುರ್ಡೇಶ್ವರದ ಆರ್ .ಎನ್.ಶೆಟ್ಟಿ ರೂರಲ್ ಪಾಲಿಟೆಕ್ನಿಕನಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಸಂಗಮ 2018 ರ ಕ್ರೀಡಾ ಸಾಂಸ್ಕೃತಿಕ ಹಬ್ಬ ಜರುಗಿತು. ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ವಿಜೇತ ಎಸ್.ಜೆ.ಕೈರನ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಜೀವನದ ಮೌಲ್ಯಗಳನ್ನು ಮನ ಮುಟ್ಟುವಂತೆ ತಿಳಿಸಿದರು. ಮುಖ್ಯ ಅತಿಥಿ ಉದ್ಯಮಿ ಸತೀಶ ಕುಮಾರ ಶೆಟ್ಟಿ ತಮ್ಮ ವಿದ್ಯಾರ್ಥಿ ಜೀವನದ ಅನುಭವಗಳನ್ನು ಹಂಚಿಕೊಂಡರು.
ಪ್ರಾಚಾರ್ಯ ಸಂತೋಷ ಆರ್.ಎ, ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಇದೇ ಸಂದರ್ಭದಲ್ಲಿ ಪಾಲಿಟೆಕ್ನಿಕ್ ಮೂಲಕ ಸಮುದಾಯ ಅಭಿವೃದ್ಧಿ ಯೋಜನೆಯ 2017-18 ರ ಕಾರ್ಯ ಚಟುವಟಿಕೆಯ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ನಂತರ ಯೋಜನೆಯ ಸಂಯೋಜನಾಧಿಕಾರಿ ಹಾಗೂ ಉಪಪ್ರಾಚಾರ್ಯ ಕೆ.ಮರಿಸ್ವಾಮಿ ಸಿ.ಡಿ.ಟಿ.ಪಿ ಯೋಜನೆಯ ವರದಿಯನ್ನು ಓದಿದರು. ಶಿಕ್ಷಣ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಆರ್ .ಎನ್.ಎಸ್ ಶಿಕ್ಷಣ ಸಂಸ್ಥೆಯ ನಿರ್ದೇಶಕ ಎಮ್.ವಿ.ಹೆಗಡೆ ವಹಿಸಿದರು. ವೇದಿಕೆ ಮೇಲೆ ಎಲ್ಲಾ ವಿಭಾಗ ಮುಖ್ಯಸ್ಥರು, ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಮನರಂಜನೆ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿದವು.