ನಾಟೆಕಲ್ ನಲ್ಲಿ ಯುವಕನಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು
Update: 2018-04-10 23:32 IST
ಕೊಣಾಜೆ, ಎ. 10: ಕೊಣಾಜೆ ಠಾಣೆ ವ್ಯಾಪ್ತಿಯ ನಾಟೆಕಲ್ ಬಳಿ ಯುವಕನಿಗೆ ಚೂರಿಯಿಂದ ಇರಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ನಾಟೆಕಲ್ ಸಮೀಪದ ಕಿನ್ಯ ನಿವಾಸಿ ಇಬ್ರಾಹಿಂ ಸಿದ್ದೀಕ್ (27) ಇರಿತಕ್ಕೊಳಗಾದವರು ಎಂದು ಗುರುತಿಸಲಾಗಿದೆ.
ನಾಟೆಕಲ್ ಬಳಿಯ ಅಜ್ಮಲ್ ಎಂಬಾತ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ ಎಂದು ಗಾಯಾಳು ಆರೋಪಿಸಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಇಲ್ಲಿನ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.