‘ಮಾದಕ ವ್ಯಸನ -ಯುವ ಜನತೆ’ ಅರಿವು ಕಾರ್ಯಕ್ರಮ
Update: 2018-04-11 20:16 IST
ಉಡುಪಿ, ಎ.11: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಟಕ, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಹಾಗೂ ಸಂತೆ ಕಟ್ಟೆ ಗೊರೆಟ್ಟಿ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಮಾದಕ ವ್ಯಸನ ಮತ್ತು ಯುವ ಜನತೆ ಕುರಿತ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ದೊಡ್ಡಣಗುಡ್ಡೆ ಡಾ.ಎ.ವಿ.ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮಾದಕ ವ್ಯಸನಗಳಿಂದ ಯುವ ಜನತೆಯ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವಾ ಅಧ್ಯಕ್ಷತೆಯನ್ನು ವಹಿಸಿದ್ದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಧಿಕಾರಿಗಳಾದ ರವಿನಂದನ್ ಹಾಗೂ ಅನುಪಮಾ ಮೊದಲಾದವರು ಉಪಸ್ಥಿತರಿದ್ದರು.