×
Ad

ಭೀಮ್‌ಸೇನೆ ಕಾರ್ಯಕರ್ತರ ಬಂಧನ

Update: 2018-04-11 21:24 IST

ಲಕ್ನೊ, ಎ.11: ಶಾಂತಿ ಕದಡುವ ಪ್ರಯತ್ನ ನಡೆಸಿದ ಆರೋಪದಡಿ ಭೀಮ್‌ಸೇನೆಯ ಇಬ್ಬರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಜೈಲಿನಲ್ಲಿರುವ ಭೀಮ್‌ಸೇನೆಯ ಸ್ಥಾಪಕ ಚಂದ್ರಶೇಖರ್‌ಗೆ ಬೆಂಬಲ ಸೂಚಿಸಿ ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ಶಾಮ್ಲಿ ಜಿಲ್ಲೆಯಲ್ಲಿ ಶಾಂತಿ ಕದಡುವ ಪ್ರಯತ್ನ ನಡೆಸಿದ ಆರೋಪದಡಿ ಇವರಿಬ್ಬರನ್ನು ಬಂಧಿಸಲಾಗಿದ್ದು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಿದ ಬಳಿಕ ಬಿಡುಗಡೆಗೊಳಿಸಲಾಗಿದೆ ಎಂದು ಥನಭವನ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

 ಎಪ್ರಿಲ್ 2ರಂದು ನಡೆದ ಭಾರತ್ ಬಂದ್ ಪ್ರತಿಭಟನೆಯಲ್ಲಿ ಕನಿಷ್ಟ 11 ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ ದಲಿತರ ವಿರುದ್ಧದ ದೌರ್ಜನ್ಯ ಕೊನೆಗೊಳ್ಳಬೇಕು ಎಂದು ಆಗ್ರಹಿಸಿ ತಾನು ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಚಂದ್ರಶೇಖರ್ ಘೋಷಿಸಿದ್ದರು. ಇದನ್ನು ಬೆಂಬಲಿಸಿ ಭೀಮ್‌ಸೇನೆಯ ಇಬ್ಬರು ಕಾರ್ಯಕರ್ತರೂ ಉಪವಾಸ ಸತ್ಯಾಗ್ರಹ ಘೋಷಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News