ಸಿಧುವನ್ನು ಜೈಲಿಗೆ ಹಾಕಿ ಎಂದ ಅವರದೇ ಸರಕಾರ!
Update: 2018-04-12 19:10 IST
ಹೊಸದಿಲ್ಲಿ, ಎ.12: 1988ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಕ್ರಿಕೆಟಿಗ, ರಾಜಕಾರಣಿ ನವ್ ಜೋತ್ ಸಿಂಗ್ ಸಿಧು ಅಪರಾಧಿ ಎಂದು ಘೋಷಿಸಬೇಕೆಂದು ಪಂಜಾಬ್ ಸರಕಾರವು ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ತನ್ನ ಪಾತ್ರವೇನೂ ಇಲ್ಲ ಎಂದು ಸಿಧು ನೀಡಿರುವ ಹೇಳಿಕೆ ಸುಳ್ಳಾಗಿದೆ ಎಂದು ಪಂಜಾಬ್ ಸರಕಾರದ ಸಮಿತಿ ಸುಪ್ರೀಂಕೋರ್ಟ್ ಗೆ ತಿಳಿಸಿದೆ. ಈ ಪ್ರಕರಣದಲ್ಲಿ ಸಿಧು ಧೋಷಿ ಎಂದು ತೀರ್ಪಿತ್ತ ಪಂಜಾಬ್ ಮತ್ತು ಹರ್ಯಾಣ ಕೋರ್ಟ್ ಆದೇಶವನ್ನು ಎತ್ತಿ ಹಿಡಿಯಬೇಕೆಂದೂ ಸಮಿತಿ ಕೋರಿದೆ. ಈ ಪ್ರಕರಣದಲ್ಲಿ ಸಿಧು ಅವರಿಗೆ ನ್ಯಾಯಾಲಯವು 3 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
1988 ಡಿಸೆಂಬರ್ 27ರಂದು ಈ ಘಟನೆ ನಡೆದಿತ್ತು. 65 ವರ್ಷದ ಗುರ್ನಾಮ್ ಸಿಂಗ್ ಎಂಬವರಿಗೆ ಸಿಧು ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಹಲ್ಲೆಯಿಂದ ಗುರ್ನಾಮ್ ಸಿಂಗ್ ಮೃತಪಟ್ಟಿದ್ದರು,