×
Ad

ಹಿಂದೂ ಧರ್ಮ ಅವಹೇಳನ ಮಾಡುವವರ ವಿರುದ್ಧ ಕ್ರಮ: ಪಾಕ್ ಸರಕಾರಕ್ಕೆ ನ್ಯಾಶನಲ್ ಅಸೆಂಬ್ಲಿ ಸ್ಪೀಕರ್ ಸೂಚನೆ

Update: 2018-04-12 22:25 IST

ಇಸ್ಲಾಮಾಬಾದ್ (ಪಾಕಿಸ್ತಾನ), ಎ. 12: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಬರಹಗಳನ್ನು ಪ್ರಕಟಿಸುತ್ತಿರುವ ವ್ಯಕ್ತಿಗಳು ಮತ್ತು ಗುಂಪುಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪಾಕಿಸ್ತಾನದ ನ್ಯಾಶನಲ್ ಅಸೆಂಬ್ಲಿ ಸ್ಪೀಕರ್ ಸರ್ದಾರ್ ಅಯಾಝ್ ಸಾದಿಕ್ ಆಂತರಿಕ ಸಚಿವಾಲಯಕ್ಕೆ ಸೂಚನೆ ನೀಡಿದ್ದಾರೆ.

ಹಿಂದೂ ಧಾರ್ಮಿಕ ಭಾವನೆಗಳಿಗೆ ಘಾಸಿಯುಂಟು ಮಾಡುವ ಆನ್‌ಲೈನ್ ದ್ವೇಷ ಭಾಷಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿರುವುದನ್ನು ಅಲ್ಪಸಂಖ್ಯಾತ ಸಮುದಾಯದ ನಾಯಕರು ಪ್ರತಿಭಟಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ.

ಪಾಕಿಸ್ತಾನ್ ತೆಹ್ರೀಕಿ ಇನ್ಸಾಫ್ (ಪಿಟಿಐ) ಪಕ್ಷದ ನಾಯಕ ಇಮ್ರಾನ್ ಖಾನ್‌ರನ್ನು ಹಿಂದೂ ದೇವರಂತೆ ಬಿಂಬಿಸುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಹಿಂದೂ ಸಮುದಾಯದ ಸಂಸದರು ಈ ಬಗ್ಗೆ ನ್ಯಾಶನಲ್ ಅಸೆಂಬ್ಲಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ನ್ಯಾಶನಲ್ ಅಸೆಂಬ್ಲಿ ಸ್ಪೀಕರ್ ಈ ಸೂಚನೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News