ಶಾಂತಿಅಂಗಡಿ ವಾರ್ಡ್: ಎಸ್‌ಡಿಪಿಐ ಕಾರ್ಯಕರ್ತರ ಸಭೆ
Update: 2018-04-12 23:19 IST
ಬಂಟ್ವಾಳ, ಎ. 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶಾಂತಿಅಂಗಡಿ ವಾರ್ಡ್ ಸಮಿತಿ ವತಿಯಿಂದ ಚುನಾವಣಾ ಪೂರ್ವ ತಯಾರಿಯ ಭಾಗವಾಗಿ ಎಸ್‌ಡಿಪಿಐ ಕಾರ್ಯಕರ್ತರ ಸಭೆ ಗುರುವಾರ ರಾತ್ರಿ ಶಾಂತಿ ಅಂಗಡಿಯಲ್ಲಿ ನಡೆಯಿತು.
ಎಸ್‌ಡಿಪಿಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರಾಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ, ಕ್ಷೇತ್ರಾದ್ಯಂತ ನಡೆಯುತ್ತಿರುವ ಕಾರ್ಯಕರ್ತರ ಮತ್ತು ಬೆಂಬಲಿಗರ ಸಭೆಯಲ್ಲಿ ಅಭೂತ ಪೂರ್ವ ಪ್ರತಿಕ್ರಿಯೆ ದೊರಕುತ್ತಿದ್ದು, ಈ ಬಾರಿ ಬಂಟ್ವಾಳದಲ್ಲಿ ಎಸ್‌ಡಿಪಿಐ ಇತಿಹಾಸ ಸೃಷ್ಟಿಸಲಿದೆ. ಅಲ್ಲದೇ ನಮ್ಮ ಮತಗಳನ್ನು ಪಡೆದು ವಂಚಿಸಿದ ಜನಪ್ರತಿನಿಧಿಗಳಿಗೆ ತಕ್ಕ ಉತ್ತರ ಸಿಗಲಿದೆ ಎಂದರು.
ಸಭೆಯಲ್ಲಿ ಬಂಟ್ವಾಳ ಪುರಸಭೆಯ ಮಾಜಿ ಉಪಾಧ್ಯಕ್ಷ ಇಕ್ಬಾಲ್ ಐ.ಎಂ.ಆರ್, ವಾರ್ಡ್ ಅಧ್ಯಕ್ಷ ಇಸ್ಮಾಯಿಲ್ ಉಪಸ್ಥಿತರಿದ್ದರು