ಅನುಮತಿಗಿಂತ ಅಧಿಕ ಫ್ಲೆಕ್ಸ್ ಬಳಕೆ: ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

Update: 2018-04-13 10:15 GMT

ಹುಬ್ಬಳ್ಳಿ, ಎ.13: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಿನ್ನೆ ಹುಬ್ಬಳ್ಳಿಯಲ್ಲಿ ನಡೆಸಿದ ರೋಡ್ ಶೋ ವೇಳೆ ಅನುಮತಿಗಿಂತ ಅಧಿಕ ಪ್ಲೆಕ್ಸ್ ಬಳಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡನೋರ್ವನ ವಿರುದ್ಧ ಎಫ್.ಐ.ಆರ್. ದಾಖಲಾಗಿದೆ.

ಇಲ್ಲಿನ ಬಿಜೆಪಿ ಮುಖಂಡ ಶಶಿಶೇಖರ ಡಂಗನವರ್ ವಿರುದ್ಧ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಿನ್ನೆ ಇಲ್ಲಿನ ಮೂರುಸಾವಿರ ಮಠದಿಂದ ದುರ್ಗದ ಬೈಲ್ ವರಗೆ ಅಮಿತ್ ಶಾ ರೋಡ್ ಶೋ ನಡೆಸಿದ್ದರು. ಈ ವೇಳೆ ಭಾರೀ ಪ್ರಮಾಣದಲ್ಲಿ ಫ್ಲೆಕ್ಸ್, ಬಂಟಿಂಗ್ಸ್, ಬ್ಯಾನರ್‌ಗಳನ್ನ ಬಳಕೆ ಮಾಡಿದ್ದರು. ಅನುಮತಿಗಿಂತ ಅಧಿಕ ಬ್ಯಾನರ್, ಫ್ಲೆಕ್ಸ್‌ಗಳನ್ನು ಬಳಸಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಚುನಾವಣಾಧಿಕಾರಿಗಳು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಹೀಗಾಗಿ ಆರ್‌ಪಿಐ 17ರ ಕಾಯ್ದೆಯಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News