ಇನ್ನು ಪಠ್ಯಪುಸ್ತಕದಲ್ಲಿ ಮಕ್ಕಳ ಸಹಾಯವಾಣಿ ನಂಬರ್

Update: 2018-04-13 16:28 GMT

ಹೊಸದಿಲ್ಲಿ, ಎ.13: 6ನೇ ತರಗತಿಯಿಂದ 12ನೇ ತರಗತಿಯವರೆಗಿನ ಪಠ್ಯಪುಸ್ತಕದಲ್ಲಿ ಮಕ್ಕಳ ಸಹಾಯವಾಣಿ ನಂಬರ್ ಪ್ರಕಟಿಸಲು ಎನ್‌ಸಿಇಆರ್‌ಟಿ ನಿರ್ಧರಿಸಿದೆ.

 ಇದರಿಂದ ಸುಮಾರು 26 ಕೋಟಿ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ. ಇಲಾಖೆಯ ಸಚಿವೆ ಮೇನಕಾ ಗಾಂಧಿ ಈ ವಿಚಾರವನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಗಮನಕ್ಕೆ ತಂದಿದ್ದರು.

ಎನ್‌ಸಿಇಆರ್‌ಟಿ (ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಆ್ಯಂಡ್ ಟ್ರೈನಿಂಗ್) ಪ್ರಕಟಿಸುವ 6ರಿಂದ 12ನೇ ತರಗತಿವರೆಗಿನ ಎಲ್ಲಾ ಪಠ್ಯಪುಸ್ತಕಗಳ ಮುಖಪುಟದ ಹಿಂಬದಿಯಲ್ಲಿ ಮಕ್ಕಳ ಸಹಾಯವಾಣಿ (1098) ಸಂಖ್ಯೆ ಹಾಗೂ ಪೊಕ್ಸೊ ಕಾಯ್ದೆಯ ಕುರಿತ ಮಾಹಿತಿ ಪ್ರಕಟವಾಗಲಿದೆ. ಮಕ್ಕಳು ತಮ್ಮ ಸುತ್ತಮುತ್ತ ನಡೆಯುವ ಯಾವುದೇ ಸಂಶಯಾಸ್ಪದ ಚಟುವಟಿಕೆಗಳ ಬಗ್ಗೆ ತಕ್ಷಣ ಸಹಾಯವಾಣಿಗೆ ಕರೆ ಮಾಡಿ ತಿಳಿಸಬಹುದು ಎಂದು ಮೇನಕಾ ಗಾಂಧಿ ತಿಳಿಸಿದ್ದಾರೆ. ಅಲ್ಲದೆ ಈ ಮೇಲಿನ ವಿಷಯಗಳ ಕುರಿತು ಸಾಮಾಜಿಕ ವಿಜ್ಞಾನ ಪಠ್ಯಪುಸ್ತಕದಲ್ಲಿ ಅಧ್ಯಾಯವೊಂದನ್ನು ಸೇರಿಸುವ ಬಗ್ಗೆಯೂ ಇಲಾಖೆ ಸಲಹೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News