ಎನ್‌ಎಂಪಿಟಿಯಲ್ಲಿ ಅಂಬೇಡ್ಕರ್ ಜಯಂತಿ
Update: 2018-04-14 20:53 IST
ಮಂಗಳೂರು, ಎ. 14: ನವ ಮಂಗಳೂರು ಬಂದರು ಮಂಡಳಿಯಿಂದ 127ನೆ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಮಂಡಳಿಯ ಪ್ರಭಾರ ಅಧ್ಯಕ್ಷ ಸುರೇಶ್ ಪಿ.ಶಿರ್ವಾಡ್ಕರ್ ವಹಿಸಿದ್ದರು. ಮಂಗಳೂರು ವಿಶ್ವ ವಿದ್ಯಾನಿಲಯದ ರಾಜಕೀಯ ಶಾಸ್ತ್ರ ವಿಭಾಗದ ಪ್ರೊ.ಜಯರಾಜ್ ಅಮಿನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅಂಬೇಡ್ಕರ್ ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ಸುಗೊಳ್ಳಲು ಅಡಿಗಲ್ಲು ಹಾಕಿಕೊಟ್ಟವರು ಎಂದರು.