×
Ad

ಮಂಡ್ಯ: ನಾಲೆಗಳಿಗೆ ನೀರು ಸ್ಥಗಿತ ವಿರುದ್ಧ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರ ಬಂಧನ

Update: 2018-04-15 23:22 IST

ಮಂಡ್ಯ,ಎ.15: ನಾಲೆಗಳಿಗೆ ನೀರು ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಭಾನುವಾರ ನಗರದಲ್ಲಿ ಪ್ರತಿಭಟನೆಗಿಳಿದ ಬಿಜೆಪಿ ಕಾರ್ಯಕರ್ತರುನ್ನು ಪೊಲೀಸರು ಬಂಧಿಸಿದ್ದಾರೆ.

ಕೆಆರ್‍ಎಸ್ ಜಲಾಶಯದಲ್ಲಿ ನೀರಿನ ಕೊರತೆ ಇರುವುದರಿಂದ ನಾಲೆಗಳಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಿದ್ದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೆ.ಎಸ್.ನಂಜುಂಡೇಗೌಡ, ಜಿಪಂ ಸದಸ್ಯ ಎನ್.ಶಿವಣ್ಣ, ಇತರ ಮುಖಂಡರ ನೇತೃತ್ವದಲ್ಲಿ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಾಲ್ಕುದಿನಗಳಿಂದ ಹರಿಯುತ್ತಿದ್ದ ನೀರನ್ನು ಹಠಾತ್ ಸ್ಥಗಿತಗೊಳಿಸಲಾಗಿದೆ. ಇದರಿಂದ ನಾಲೆಯ ಕೊನೆಭಾಗದ ಸಾವಿರಾರು ಎಕರೆ ಭೂಮಿ ಬೆಳೆಗಳು ಒಣಗಿ ಹೋಗಲಿವೆ ಎಂದು ಅವರು ಕಿಡಿಕಾರಿದರು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News