ಫ್ರಾನ್ಸ್: ಕಾರ್ಮಿಕ ಕಾನೂನಿಗೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ; 63 ಪ್ರತಿಭಟನಕಾರರ ಬಂಧನ
Update: 2018-04-15 23:55 IST
ಪ್ಯಾರಿಸ್, ಎ. 15: ಫ್ರಾನ್ಸ್ ಅಧ್ಯಕ್ಷ ಇಮಾನುಯೆಲ್ ಮ್ಯಾಕ್ರೋನ್ ಕಾರ್ಮಿಕ ಕಾನೂನಿಗೆ ತರಲುದ್ದೇಶಿಸಿರುವ ತಿದ್ದುಪಡಿಯನ್ನು ವಿರೋಧಿಸಿ ಜನರು ಎರಡು ನಗರಗಳಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರೊಂದಿಗೆ ನಡೆದ ಘರ್ಷಣೆಯಲ್ಲಿ 9 ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸರು 63 ಪ್ರತಿಭಟನಕಾರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಪಶ್ಚಿಮ ಫ್ರಾನ್ಸ್‌ನ ನ್ಯಾಂಟಿಸ್ ಮತ್ತು ದಕ್ಷಿಣ ಫ್ರಾನ್ಸ್‌ನ ಮಾಂಟ್‌ಪೆಲಿಯರ್‌ನಲ್ಲಿ ನಡೆದ ಪ್ರತಿಭಟನೆಗಳ ವೇಳೆ ಸಂಭವಿಸಿದ ಹಿಂಸಾಚಾರದಲ್ಲಿ ಹಲವಾರು ಅಂಗಡಿಗಳು ಮತ್ತು ಸರಕಾರಿ ಕಟ್ಟಡಗಳಿಗೆ ಹಾನಿಯಾಗಿದೆ.
ಶನಿವಾರ ಇತರ ಕಡೆಗಳಲ್ಲಿ ನಡೆದ ಪ್ರತಿಭಟನೆಗಳು ಬಹುತೇಕ ಶಾಂತಿಯುತವಾಗಿತ್ತು.