ತಪ್ಪಿದ ‘ಕೈ’ ಟಿಕೆಟ್ : ಅಲ್ಲಲ್ಲಿ ಪ್ರತಿಭಟನೆಯ ಕಾವು

Update: 2018-04-16 05:27 GMT

ಬೆಂಗಳೂರು, ಎ.16: ಕಾಂಗ್ರೆಸ್ ಪಕ್ಷದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಅಸಮಾಧಾನ ಕಂಡು ಬಂದಿದೆ.

ನೆಲಮಂಗಲದಲ್ಲಿ ಅಂಜನಮೂರ್ತಿಗೆ ಟಿಕೆಟ್ ಸಿಗದಕ್ಕೆ ಅವರ ಬೆಂಬಲಿಗರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.ತುಮಕೂರು- ಬೆಂಗಳೂರು ಹೆದ್ದಾರಿಯಲ್ಲಿ ಟ್ರಾಪಿಕ್ ಜಾಮ್ ಆಗಿದೆ.  ರಸ್ತೆಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಚಿಕ್ಕಮಗಳೂರು, ಕಡೂರು ತರೀಕರೆ  ಕ್ಷೇತ್ರದಲ್ಲಿ ಭಿನ್ನಮತ ಕಾಣಿಸಿಕೊಂಡಿದೆ. ಶಾಸಕ ಶ್ರೀನಿವಾಸ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಚಿಂತನೆ ನಡೆಸಿದ್ದಾರೆ.

ಹಾನಗಲ್ ನಲ್ಲಿ ಶಾಸಕ ಮನೋಹರ್ ತಹಶೀಲ್ದಾರ್ ಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಸಲು ತಯಾರಿ ನಡೆಸಿದ್ದಾರೆ. ಶಾಸಕ ಷಡಷ್ಕರಿಗೆ  ಟಿಕೆಟ್ ಕೈ ತಪ್ಪಿದ ಕಾರಣಕ್ಕಾಗಿ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ಪ್ರತಿಭಟನೆ ಕಂಡು ಬಂದಿದೆ.

ಬಾದಾಮಿಯಲ್ಲಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರಿಗೆ ಟಿಕೆಟ್ ಸಿಗದಕ್ಕೆ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ. ಆದರೆ ಚಿಮ್ಮನಕಟ್ಟಿ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ. ''ನನಗೆ ಬಿ ಫಾರಂ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಬಾದಾಮಿಗೆ ಬಂದ್ರೆ ಆಗಬಹುದು. ಆದ್ರೆ ಬೇರೆಯವರಿಗೆ ಕ್ಷೇತ್ರ ಬಿಟ್ಟುಕೊಡುವುದಿಲ್ಲ'' ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News