ಮಕ್ಕಾ ಮಸೀದಿ ಸ್ಫೋಟ ಪ್ರಕರಣದ ತೀರ್ಪು ನೀಡಿದ ಕೆಲ ಗಂಟೆಗಳಲ್ಲೇ ರಾಜೀನಾಮೆ ನೀಡಿದ ನ್ಯಾಯಾಧೀಶರು

Update: 2018-04-16 13:56 GMT

ಹೈದರಾಬಾದ್, ಎ.16: 2007ರ ಮಕ್ಕಾ ಮಸೀದಿ ಸ್ಫೋಟ ಪ್ರಕರಣದಲ್ಲಿ ಅಸೀಮಾನಂದ ಸೇರಿ ಐವರನ್ನು ಖುಲಾಸೆಗೊಳಿಸಿ ತೀರ್ಪಿತ್ತ ಕೆಲ ಗಂಟೆಗಳಲ್ಲೇ ಈ ತೀರ್ಪು ನೀಡಿದ ನ್ಯಾಯಾಧೀಶರು ರಾಜೀನಾಮೆ ನೀಡಿದ್ದಾರೆ.

ವೈಯಕ್ತಿಕ ಕಾರಣಗಳಿಂದ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಆಂಧ್ರ ಪ್ರದೇಶ ಮುಖ್ಯ ನ್ಯಾಯಾಧೀಶರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ವಿಶೇಷ ಎನ್ ಐಎ ನ್ಯಾಯಾಧೀಶ ರವೀಂದರ್ ರೆಡ್ಡಿ ತಿಳಿಸಿದ್ದಾರೆ.

“ಮಕ್ಕಾ ಮಸೀದಿ ಸ್ಪೋಟ ಪ್ರಕರಣದ ತೀರ್ಪು ನೀಡಿರುವ ನ್ಯಾಯಾಧೀಶರು ಸಲ್ಲಿಸಿರುವ ರಾಜೀನಾಮೆಯು ‘ಸಂಶಯಾಸ್ಪದ’ವಾಗಿದೆ” ಎಂದು ಎಐಎಂಐಎಂ ಪಕ್ಷದ ನಾಯಕ ಅಸದುದ್ದೀನ್ ಉವೈಸಿ ಟ್ವೀಟ್ ಮಾಡಿದ್ದಾರೆ.

ಮಕ್ಕಾ ಮಸೀದಿ ಸ್ಫೋಟ  ಪ್ರಕರಣಕ್ಕೆ ಸಂಬಂಧಿಸಿ ಇಂದು ತೀರ್ಪು ನೀಡಿದ್ದ ವಿಶೇಷ ನ್ಯಾಯಾಧೀಶರು ಅಸೀಮಾನಂದ ಸೇರಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News