ಎ.17 ರಿಂದ ನಿಷೇಧಾಜ್ಞೆ ಜಾರಿ

Update: 2018-04-16 16:12 GMT

ಬೆಂಗಳೂರು, ಎ.16: ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದಾಗಿ ನಿಷೇದಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‌ಕುಮಾರ್ ಆದೇಶ ಹೊರಡಿಸಿದ್ದಾರೆ.

ಬೆಳಗ್ಗೆ 10 ಗಂಟೆಯಿಂದ ಎ.24ರ ಸಂಜೆ 6 ಗಂಟೆವರೆಗೂ ನಗರದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸ್ವೀಕರಿಸುವ ಎಲ್ಲ ಚುನಾವಣಾಧಿಕಾರಿ ಕಚೇರಿಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ.

ನಿಷೇಧ: ಕಾನೂನು ಭಂಗವುಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಹಾಗೂ ಮೆರವಣಿಗೆ ಮತ್ತು ಸಭೆಗಳನ್ನು ನಿಷೇಧಿಸಲಾಗಿದೆ. ಶಸ್ತ್ರಾಸ್ತ್ರಗಳನ್ನು, ಸ್ಪೋಟಕ ವಸ್ತುಗಳು, ಕಲ್ಲುಗಳು ಹಾಗೂ ಉಪಕರಣಗಳನ್ನು ಶೇಖರಿಸುವುದನ್ನು ನಿಷೇಧ ಮಾಡಲಾಗಿದೆ.

ವ್ಯಕ್ತಿ ಪ್ರತಿಕೃತಿಗಳ ಪ್ರದರ್ಶನ, ಪ್ರಚೋದಿಸಬಹುದಾದ ಬಹಿರಂಗ ಘೋಷಣೆ, ಸಂಜ್ಞೆ, ಹಾಡುವುದು, ಸಂಗೀತ ನುಡಿಸುವುದು, ಚಿತ್ರ, ಸಂಕೇತಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ ಎಂದು ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News