ಬಿಜೆಪಿ ಕಾರ್ಯಕ್ರಮದಲ್ಲಿ ಪಾನಕ ವಿತರಣೆ: ಪ್ರಕರಣ ದಾಖಲು
Update: 2018-04-16 22:21 IST
ಶಿರ್ವ, ಎ.16: ಶಿರ್ವ ಗ್ರಾಮದ ಕೊಲ್ಲಬೆಟ್ಟು ಎಂಬಲ್ಲಿ ಎ.15ರಂದು ಬೆಳಗ್ಗೆ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಪಾನಕ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಪಕ್ಷದ ವತಿಯಿಂದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಎಂಬವರ ಮನೆಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಪಾನಕ ನೀಡಿರುವುದು ಚುನಾವಣಾ ಕಾರ್ಯದ ಕ್ಯಾಮೆರಾಮೆನ್ ಮಾಹಿತಿ ಸಂಗ್ರಹಿಸಿದ್ದಾರೆ. ಈ ಘಟನೆ ಚುನಾವಣಾ ನೀತಿ ಸಂಹಿತೆಗೆ ವಿರೋಧವಾಗಿದೆ ಎಂದು ಕಾಪು ವಿಧಾನ ಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ ತಂಡದ ಸುರೇಂದ್ರನಾಥ್ ಶೆಟ್ಟಿ ಶಿರ್ವ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.