×
Ad

ಕಲ್ಯಾಣಪುರ: ಮತದಾನ ಅರಿವು ಕಾರ್ಯಕ್ರಮ

Update: 2018-04-17 20:19 IST

ಉಡುಪಿ, ಎ17: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಟಕದ ವತಿಯಿಂದ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಮತದಾನ ಮತ್ತು ಯುವ ಜನತೆ ಬಗ್ಗೆ ಅರಿವು ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಮ್ಮ ಭೂಮಿ ಸಂಸ್ಥೆಯ ಸಂಯೋಜ ನಾಧಿಕಾರಿ ಕೃಪಾ ಮತದಾನದ ಮಹತ್ವ ಮತ್ತು ಜಾಗೃತಿ ಅಭಿಯಾನದ ಕುರಿತು ಮಾಹಿತಿ ನೀಡಿ ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳಿಂದ ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವಾ ಅಧ್ಯಕ್ಷತೆಯನ್ನು ವಹಿಸಿದ್ದರು.

ರಾಷ್ಟ್ರೀಯ ಸೇವಾ ಯೋಜನಾ ಘಟಕದ ಅಧಿಕಾರಿಗಳಾದ ರವಿನಂದನ್ ಹಾಗೂ ಅನುಪಮಾ, ಘಟಕದ ನಾಯಕರುಗಳು, ಸ್ವಯಂಸೇವಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News