ಆರ್‌ಸಿಬಿಗೆ ಮೂರನೇ ಸೋಲು
Update: 2018-04-17 23:53 IST
ಮುಂಬೈ, ಎ.17: ನಾಯಕ ರೋಹಿತ್ ಶರ್ಮಾ ಮತ್ತು ಆರಂಭಿಕ ದಾಂಡಿಗ ಎವಿನ್ ಲೆವಿಸ್ ಅರ್ಧಶತಕಗಳ ನೆರವಿನಲ್ಲಿ ಮುಂಬೈ ತಂಡ ಐಪಿಎಲ್ ಟ್ವೆಂಟಿ-20 ಟೂರ್ನಿಯ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 46 ರನ್‌ಗಳ ಜಯ ಗಳಿಸಿದೆ.
ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಗೆಲುವಿಗೆ 214 ರನ್‌ಗಳ ಸವಾಲು ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್‌ಗಳಲ್ಲಿ 8ವಿಕೆಟ್ ನಷ್ಟದಲ್ಲಿ 167 ರನ್ ಗಳಿಸಿತು.
ಆರ್‌ಸಿಬಿ ಪರ ನಾಯಕ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ನಡೆಸಿದರೂ ತಂಡ ಗೆಲುವಿನ ದಡ ಸೇರಲಿಲ್ಲ. ಅವರು ಔಟಾಗದೆ 92 ರನ್( 62ಎ, 7ಬೌ, 4 ಸಿ) ಗಳಿಸಿದರು.
ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 213 ರನ್ ಗಳಿಸಿತ್ತು.