ಮಂಗಳೂರು: ನೂತನ ಪೊಲೀಸ್ ಕಮಿಷನರ್ ಅಧಿಕಾರ ಸ್ವೀಕಾರ

Update: 2018-04-18 15:18 GMT

ಮಂಗಳೂರು, ಎ.18: ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ವಿಪುಲ್ ಕುಮಾರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.

ಅವರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಿರ್ಗಮನ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರಿಂದ ಅಧಿಕಾರ ಸ್ವೀಕರಿಸಿದರು.

1999ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ವಿಪುಲ್ ಕುಮಾರ್ ಅವರು ಐಜಿಪಿ ಮತ್ತು ಕರ್ನಾಟಕ ಪೊಲೀಸ್ ಅಕಾಡಮಿ ಮೈಸೂರು ಇದರ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News