ಬೆಂಗಳೂರು: 3 ಲಕ್ಷಕ್ಕೂ ಹೆಚ್ಚು ಮೌಲ್ಯದ 40 ಮೊಬೈಲ್ ಕಳವು

Update: 2018-04-18 16:43 GMT

ಬೆಂಗಳೂರು, ಎ.18: ಮೊಬೈಲ್ ಅಂಗಡಿಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ದುಷ್ಕರ್ಮಿಗಳು 3 ಲಕ್ಷಕ್ಕೂ ಹೆಚ್ಚು ಮೌಲ್ಯದ ಹೊಸ 40 ಮೊಬೈಲ್‌ಗಳನ್ನು ಕಳವು ಮಾಡಿರುವ ಘಟನೆ ಇಲ್ಲಿನ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಮತ್ತಿಕೆರೆಯ ಎಚ್‌ಎಂಟಿ ಮುಖ್ಯರಸ್ತೆಯಲ್ಲಿರುವ ವಿವೊ ಮೊಬೈಲ್ ಅಂಗಡಿಗೆ ರಾತ್ರಿ 2ರ ಸುಮಾರಿನಲ್ಲಿ ರೋಲಿಂಗ್ ಶೆಟರ್ ಮುರಿದು ಒಳ ನುಗ್ಗಿರುವ ದುಷ್ಕರ್ಮಿಗಳು,ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಅಂಗಡಿ ಮಾಲಕ ಸಂಜಯ್ ಎಂಬುವರು ಬುಧವಾರ ಬೆಳಗ್ಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಯಶವಂತಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News