ಮೈಸೂರು: ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ ಲಿಂಗಾಯತ ಮುಖಂಡರು
Update: 2018-04-18 22:45 IST
ಮೈಸೂರು,ಎ.18: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ಚರಿ ಕ್ಷೇತ್ರಕ್ಕೆ ಕಾಲಿಡುತ್ತಿದ್ದಂತೆ ಬಸವಜಯಂತಿ ಪೂರ್ವದಲ್ಲೇ ಲಿಂಗಾಯತ ಮುಖಂಡರು ಕೈ ಬೆಂಬಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದೊಡ್ಡಕಾಟೂರಿನ 50 ಕ್ಕೂ ಹೆಚ್ಚು ಲಿಂಗಾಯತ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಯುವ ಮುಂಖಡ ರಾಕೇಶ್ ಪಾಪಣ್ಣ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲಿಂಗಾಯತ ಮುಖಂಡರನ್ನು ಬರಮಾಡಿಕೊಂಡರು. ಮೊನ್ನೆಯಷ್ಟೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದರು. ನಿನ್ನೆ ಪುತ್ರ ಡಾ.ಯತೀಂದ್ರ ಸ್ಪರ್ಧಿಸಿರುವ ವರುಣದಲ್ಲಿ ಪ್ರವಾಸ ನಡೆಸಿದ್ದರು. ಬಳಿಕ ಸಂಜೆಯ ವೇಳೆಗೆ ಚಾಮುಂಡೇಶ್ವರಿ ಕ್ಷೇತ್ರದ ಲಿಂಗಾಯತ ಮುಖಂಡರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ