ಮಹಾಲಕ್ಷ್ಮೀ ಲೇಔಟ್‌ನಲ್ಲಿ ಬಿಜೆಪಿ ಬಂಡಾಯ ಬಾವುಟ

Update: 2018-04-19 06:57 GMT

ಬೆಂಗಳೂರು, ಎ.19: ಮಹಾಲಕ್ಷ್ಮೀ ಲೇಔಟ್‌ನಲ್ಲಿ ಕಾಂಗ್ರೆಸ್‌ನಿಂಧ ವಲಸೆ ಬಂದಿರುವ ನೆ.ಲ. ನರೇಂದ್ರಬಾಬು ಅವರಿಗೆ ಬಿಜೆಪಿ ಟಿಕೆಟ್ ನೀಡಿರುವುದಕ್ಕೆ ಮೂಲ ಬಿಜೆಪಿಗರು ಆಕ್ರೋಶಗೊಂಡಿದ್ದು, ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಮಾಜಿ ಮೇಯರ್ ಎಸ್. ಹರೀಶ್ ಹಾಗೂ ಟಿಕೆಟ್ ಆಕಾಂಕ್ಷಿ ನಾಗರಾಜ್ ಅವರು ನರೇಂದ್ರಬಾಬು ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಬಾಬು ಹೈಕಮಾಂಡ್‌ಗೆ ಬಕೆಟ್ ಹಿಡಿದು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಾಲಕ್ಷ್ಮೀ ಲೇಔಟ್ ಬಿಜೆಪಿ ಮೋರ್ಚಾದ ಅಧ್ಯಕ್ಷರು,330 ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ‘‘ಮಹಾಲಕ್ಷ್ಮೀ ಲೇಔಟ್‌ನಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದು, ಬಿಜೆಪಿ ಪರ ಪ್ರಚಾರ ಮಾಡುವುದಿಲ್ಲ’’ ಎಂದು ಎಂ.ನಾಗರಾಜ್ ಹೇಳಿದ್ದಾರೆ.

ಗುರುವಾರ ಬಿಜೆಪಿ ರಾಜಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿದ್ದ ಮಹಾಲಕ್ಷ್ಮೀ ಲೇಔಟ್ ಬಿಜೆಪಿ ನಾಯಕರು ನರೇಂದ್ರ ಬಾಬು ಅವರಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿದ್ದಾರೆ. ಆದರೆ, ಬಾಬು ಅವರಿಗೆ ‘ಬಿ’ ಫಾರ್ಮ್ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದರಿಂದ ಮಹಾಲಕ್ಷ್ಮೀ ಲೇಔಟ್‌ನಲ್ಲಿ ಬಿಜೆಪಿ ಬಂಡಾಯ ಬಾವುಟ ಹಾರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News