ಬಿ.ಸಿ.ರೋಡ್: ಬ್ಯಾಂಕ್ ನಿಂದ ಲಕ್ಷಾಂತರ ರೂ. ಮೌಲ್ಯದ ಸೀರೆಗಳ ವಶ

Update: 2018-04-19 10:00 GMT

ಬಂಟ್ವಾಳ, ಎ. 19: ಬಿ.ಸಿ.ರೋಡಿನ ಬ್ಯಾಂಕ್‌ವೊಂದಕ್ಕೆ ಚುನಾವಣಾ ಆಯೋಗದ ತಂಡ ದಾಳಿ ನಡೆಸಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಸೀರೆಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರ ನಡೆದಿದೆ.

ಬ್ಯಾಂಕೊಂದರಲ್ಲಿ ಅಕ್ರಮವಾಗಿ ಸೀರೆಗಳನ್ನು ದಾಸ್ತಾನು ಮಾಡಲಾಗಿದೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ಚುನಾವಣಾ ಅಧಿಕಾರಿಗಳು ಈ ದಾಳಿ ನಡೆಸಿ, ಬ್ಯಾಂಕಿನ ಕೋಣೆಯೊಂದರಲ್ಲಿ ಏಳು ಚೀಲಗಳಲ್ಲಿ ತುಂಬಿಸಿಟ್ಟಿದ್ದ ಸುಮಾರು 1,222 ಸೀರೆಗಳನ್ನು ವಶಪಡಿಸಿಕೊಂಡಿ ದ್ದಾರೆ. ಇವುಗಳ ಮೌಲ್ಯ ಸುಮಾರು 2 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ನವೋದಯ ಸ್ವಸಹಾಯ ಗುಂಪಿನ ಸದಸ್ಯರಿಗೆ ವಿತರಣೆಗಾಗಿ ತಂದಿಟ್ಟಿದ್ದ ಸೀರೆಗಳಾಗಿವೆ. ಎಲ್ಲ ಬ್ಯಾಂಕ್ ಗಳ ಶಾಖೆಗಳಲ್ಲಿ ಈಗಾಗಲೇ ವಿತರಿಸಲಾಗಿದೆ. ಬಿ.ಸಿ.ರೋಡ್ ಶಾಖೆಗೆ ತಂದ ದಿನ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ವಿತರಿಸದೆ ದಾಸ್ತಾನು ಮಾಡಲಾಗಿದೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.

ಈ ಸಂಬಂಧ ದಾಸ್ತಾನು ಸೀರೆಗಳನ್ನು ವಶಪಡಿಸಿಕೊಂಡಿರುವ ಚುನಾವಣಾ ಅಧಿಕಾರಿಗಳು, ಬಂಟ್ವಾಳ ನಗರ ಠಾಣೆ ಪೊಲೀಸರ ಸಹಕಾರದೊಂದಿಗೆ ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News