ಶಾಸಕ ಸ್ಥಾನಕ್ಕೆ ಶ್ರೀನಿವಾಸ್, ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ

Update: 2018-04-19 15:24 GMT

ಬೆಂಗಳೂರು, ಎ. 19: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಬಂಡಾಯ ಸಾರಿರುವ ತರೀಕೆರೆ ಕ್ಷೇತ್ರದ ಜಿ.ಎಚ್.ಶ್ರೀನಿವಾಸ್ ಹಾಗೂ ಬಳ್ಳಾರಿ ಕ್ಷೇತ್ರದ ಎನ್.ವೈ. ಗೋಪಾಲಕೃಷ್ಣ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಗುರುವಾರ ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿರುವ ವಿಧಾನಸಭಾ ಸ್ಪೀಕರ್ ಕೆ.ಬಿ. ಕೋಳಿವಾಡ ಅವರ ನಿವಾಸಕ್ಕೆ ಇಬ್ಬರು ಶಾಸಕರು ಪ್ರತ್ಯೇಕವಾಗಿ ಭೇಟಿ ನೀಡಿ ತಮ್ಮ ರಾಜೀನಾಮೆ ನೀಡಿದ್ದು, ಸ್ಪೀಕರ್ ಕೋಳಿವಾಡ ಅವರು ಇಬ್ಬರು ಶಾಸಕರ ರಾಜೀನಾಮೆ ಅಂಗೀಕರಿಸಿದ್ದಾರೆಂದು ಗೊತ್ತಾಗಿದೆ.

ಶ್ರೀನಿವಾಸ್ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಜೆಡಿಎಸ್ ಪಕ್ಷದಿಂದ ತರೀಕೆರೆ ಕ್ಷೇತ್ರದಿಂದಲೇ ಕಣಕ್ಕಿಳಿಯುವ ಸಾಧ್ಯತೆಯಿದೆ. ಆ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅದೇ ರೀತಿ ಬಳ್ಳಾರಿ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಎನ್.ವೈ.ಗೋಪಾಲಕೃಷ್ಣ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಅಲ್ಲದೆ, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News