ಕಾಂಗ್ರೆಸ್ ನಿದ್ದೆಗೆಡಿಸಿದೆ ಜೆಡಿಎಸ್-ಬಿಜೆಪಿ ಗುಪ್ತ ಒಪ್ಪಂದ?

Update: 2018-04-20 05:44 GMT

ಬೆಂಗಳೂರು, ಎ.20: 'ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಮ್ ಅಲ್ಲದೆ ಮತ್ತಿನೇನಲ್ಲ' ಎಂದು ಕಳೆದ ತಿಂಗಳು ಕಾಂಗ್ರೆಸ್ ವ್ಯಂಗ್ಯವಾಡಿದ್ದರೆ ಇದೀಗ ಆ ಮಾತು ನಿಜವಾಗುತ್ತಿದೆಯೆಂಬ ಭಯ ಕಾಂಗ್ರೆಸ್ ಅನ್ನು ಕಾಡುತ್ತಿದೆ. ಜೆಡಿಎಸ್ ಮತ್ತು ಬಿಜೆಪಿ ಗುಪ್ತ ಒಪ್ಪಂದವೊಂದಕ್ಕೆ ಬಂದಿದೆಯೆಂಬ ಮಾತುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಮೂಲವೊಂದರ ಪ್ರಕಾರ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಹಾಗೂ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಅವರ ಪುತ್ರ ಡಾ.ಯತೀಂದ್ರ ಇಬ್ಬರನ್ನೂ ಸೋಲಿಸುವ ಉದ್ದೇಶದಿಂದಲೇ ಈ ಒಳ ಒಪ್ಪಂದಕ್ಕೆ ಬರಲಾಗಿದೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಿದ್ದರಾಮಯ್ಯನವರ ಒಂದು ಕಾಲದ ಸಮೀಪವರ್ತಿ ಜಿ.ಟಿ.ದೇವೇಗೌಡ ಅವರನ್ನು ಕಣಕ್ಕಿಳಿಸಿದೆ. ಅತ್ತ ವರುಣಾದಲ್ಲಿ ಯತೀಂದ್ರ ವಿರುದ್ಧ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡ್ಡಿಯೂರಪ್ಪ ಪುತ್ರ ರಾಘವೇಂದ್ರ ಅವರನ್ನು ಬಿಜೆಪಿ ಕಣಕ್ಕಿಳಿಸುವುದು ಬಹುತೇಕ ಖಚಿತ.

ಚಾಮುಂಡೇಶ್ವರಿಯಲ್ಲಿ ಬಿಜೆಪಿ ದುರ್ಬಲ ಅಭ್ಯರ್ಥಿಯನ್ನು ಆರಿಸಿ ದೇವೇಗೌಡರ ಗೆಲುವಿಗೆ ಸಹಾಯ ಮಾಡಲಿದೆಯೆನ್ನಲಾಗಿದೆ. ಅತ್ತ ವರುಣಾದಲ್ಲಿ ಜೆಡಿಎಸ್ ಅಭ್ಯರ್ಥಿ ಇನ್ನೂ ಪ್ರಚಾರ ಆರಂಭಿಸಿಲ್ಲ.

ಆದರೆ ರಹಸ್ಯ ಒಪ್ಪಂದದ ಸುದ್ದಿಗಳನ್ನು  ಬಿಜೆಪಿ ನಿರಾಕರಿಸಿದೆ. ಅತ್ತ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸುತ್ತಾ, ಎರಡು ಕ್ಷೇತ್ರಗಳಲ್ಲಿ ಮಾತ್ರವಲ್ಲದೆ ರಾಜ್ಯದ ವಿವಿಧೆಡೆ ಇದೇ ರೀತಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸದ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಮುಖ್ಯಮಂತ್ರಿ ಬಾದಾಮಿ ಕ್ಷೇತ್ರದಿಂದಲೂ ಮುನ್ನೆಚ್ಚರಿಕೆಯ ಕ್ರಮವಾಗಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ. ಅಲ್ಲಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಆರಿಸಲಾಗಿದ್ದರೂ ಅವರಿನ್ನೂ ನಾಮಪತ್ರ ಸಲ್ಲಿಸಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News