ದಿಲ್ಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಾಧೀಶ ರಾಜಿಂದರ್ ಸಾಚಾರ್ ನಿಧನ

Update: 2018-04-20 09:25 GMT

ಹೊಸದಿಲ್ಲಿ, ಎ.20: ದಿಲ್ಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಾಧೀಶ ರಾಜಿಂದರ್ ಸಾಚಾರ್ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಶುಕ್ರವಾರ ಸಂಜೆ 5:30ಕ್ಕೆ ಲೋಧಿ ರಸ್ತೆಯಲ್ಲಿರುವ ವಿದ್ಯುತ್ ಚಿತಾಗಾರದಲ್ಲಿ ಸಾಚಾರ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಜಸ್ಟಿಸ್(ನಿವೃತ್ತ)ಸಾಚಾರ್ ಅವರನ್ನು ಕೆಲವು ದಿನಗಳ ಹಿಂದೆ ಚಿಕಿತ್ಸೆಗಾಗಿ ಹೊಸದಿಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಸ್ಟಿಸ್(ನಿವೃತ್ತ) ಸಾಚಾರ್ 1985ರ ಆಗಸ್ಟ್ 6 ರಿಂದ 1985ರ ಡಿಸೆಂಬರ್ 22ರ ತನಕ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ಬಳಿಕ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್‌ನಲ್ಲಿ ತೊಡಗಿಸಿಕೊಂಡಿದ್ದರು.

ಭಾರತದ ಮುಸ್ಲಿಮರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಾನಮಾನವನ್ನು ಅಧ್ಯಯನ ಮಾಡಲು ಹಿಂದಿನ ಯುಪಿಎ ಸರಕಾರ ರಚಿಸಿದ್ದ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News