ಬಂಟ್ವಾಳ: ಎಸ್‌ಡಿಪಿಐ ಅಭ್ಯರ್ಥಿಯಾಗಿ ರಿಯಾಝ್ ಫರಂಗಿಪೇಟೆ ನಾಮಪತ್ರ ಸಲ್ಲಿಕೆ
Update: 2018-04-20 17:06 IST
ಬಂಟ್ವಾಳ, ಎ. 20: ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿ ರಿಯಾಝ್ ಫರಂಗಿಪೇಟೆ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಶುಕ್ರವಾರದ ಸಾಮೂಹಿಕ ನಮಾಝ್ ಬಳಿಕ ಕೈಕಂಬದಲ್ಲಿರುವ ಪಕ್ಷದ ಕಾರ್ಯಾಲಯದಿಂದ ನೂರಾರು ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ಬಿ.ಸಿ.ರೋಡಿನ ಮಿನಿ ವಿಧಾನ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅತಾವುಲ್ಲಾ ಜೋಕಟ್ಟೆ, ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ, ಎಸ್‌ಡಿಟಿಯು ರಾಜ್ಯಾಧ್ಯಕ್ಷ ಜಲೀಲ್ ಕೆ., ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಶಾಹುಲ್ ಎಸ್. ಎಚ್., ಜಿಲ್ಲಾ ಉಪಾಧ್ಯಕ್ಷ ಪಿ.ಡಿ. ಆ್ಯಂಟನಿ, ಆನಂದ್ ಮಿತ್ತಬೈಲ್ ಹಾಜರಿದ್ದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಿಯಾಝ್ ಫರಂಗಿಪೇಟೆ ಅವರು ಬಿಜೆಪಿಯ ಉಗ್ರ ಹಿಂದುತ್ವ ಹಾಗೂ ಕಾಂಗ್ರೆಸ್‌ನ ಮೃದು ಹಿಂದುತ್ವದ ವಿರುದ್ಧ ತನ್ನ ಸ್ಪರ್ಧೆ ಎಂದು ಹೇಳಿದರು.