×
Ad

ಎ.22ರಂದು ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿ

Update: 2018-04-20 20:52 IST

ಉಡುಪಿ, ಎ.20: ವಿಧಾನಸಭಾ ಚುನಾವಣೆ ಕರ್ತವ್ಯ ನಿರ್ವಹಿಸಲು ನೇಮ ಕಾತಿ ಆದೇಶ ಪಡೆದ ಎಲ್ಲ ಮತಗಟ್ಟೆ ಅಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಎ.22ರಂದು ತರಬೇತಿ ಕಾರ್ಯಕ್ರಮ ನಡೆಯಲಿದೆ.

ತರಬೇತಿ ಪೂರ್ವಾಹ್ನ 10 ಗಂಟೆಯಿಂದ ಆರಂಭವಾಗಲಿದ್ದು, ಬೈಂದೂರು ಮತ್ತು ಕುಂದಾಪುರ ಕ್ಷೇತ್ರ ವ್ಯಾಪ್ತಿಯವರಿಗೆ ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜು, ಉಡುಪಿ ಮತ್ತು ಕಾಪು ಕ್ಷೇತ್ರದವರಿಗೆ ಉಡುಪಿ ಸೈಂಟ್ ಸಿಸಿ ಲಿಯಾ ಹೈಸ್ಕೂಲ್, ಕಾರ್ಕಳ ಕ್ಷೇತ್ರ ವ್ಯಾಪ್ತಿಯವರಿಗೆ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ಆಯೋಜಿಸಲಾಗಿದೆ.

ನೇಮಕಾತಿ ಆದೇಶ ಪಡೆದಿರುವ ಎಲ್ಲ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಅವರವರ ನೇಮಕಾತಿ ಆದೇಶದಲ್ಲಿ ನಮೂದಿಸಿದ ಸ್ಥಳಗಳಲ್ಲಿ ಕಡ್ಡಾಯವಾಗಿ ತರಬೇತಿಗೆ ಹಾಜರಾಗುವಂತೆ ಮತ್ತು ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಪ್ರಜಾಪ್ರಾತಿನಿಧ್ಯ ಕಾಯಿದೆ 1951ರ ಕಲಂ 134ರನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News