×
Ad

ಉಡುಪಿ ಜಿಲ್ಲೆಯಲ್ಲಿ ಏಳು ನಾಮಪತ್ರ ಸಲ್ಲಿಕೆ

Update: 2018-04-20 20:53 IST

ಉಡುಪಿ, ಎ.20: ರಾಜ್ಯ ವಿಧಾನಸಭಾ ಚುನಾವಣೆಗೆ ಉಡುಪಿ ಜಿಲ್ಲೆಯಲ್ಲಿ ಮೂರನೇ ದಿನವಾದ ಇಂದು ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ.

 ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಸಿಪಿಎಂ ಅಭ್ಯರ್ಥಿಯಾಗಿ ಸುರೇಶ್ ಕಲ್ಲಾಗರ ಮತ್ತು ಜೆಡಿಎಸ್ ಸಿ.ರವೀಂದ್ರ ಯಾನೆ ರವಿ ಶೆಟ್ಟಿ ನಾಮಪತ್ರ, ಕುಂದಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಿ.ಶ್ರೀನಿವಾಸ ಶೆಟ್ಟಿ, ಉಡುಪಿ ವಿಧಾನ ಸಬಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಗಂಗಾಧರ್ ಭಂಡಾರಿ ಬಿರ್ತಿ, ಪಕ್ಷೇತರ ಅಭ್ಯರ್ಥಿಯಾಗಿ ರಮೇಶ್ ಮರ ಕಾಲ, ಕಾರ್ಕಳ ಕ್ಷೇತ್ರದಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಎಸ್.ಸತೀಶ ಸಾಲಿ ಯಾನ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಗೋಪಾಲ ಭಂಡಾರಿ ನಾಮಪತ್ರ ಸಲ್ಲಿಸಿದ್ದಾರೆ.

ಕಾಪು ವಿಧಾನ ಸಭಾ ಕ್ಷೇತ್ರದಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 9 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಸಲು ಎ.24 ಹಾಗೂ ನಾಮಪತ್ರ ಹಿಂಪಡೆಯಲು ಎ.27 ಕೊನೆಯ ದಿನಾಂಕವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News