×
Ad

ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ಬೋಳಿಯಾರ್‌

Update: 2018-04-20 22:25 IST

ಕೊಣಾಜೆ, ಎ. 20: ಮಂಗಳೂರು(ಉಳ್ಳಾಲ)ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ಬೋಳಿಯಾರ್ ಗ್ರಾಮ ಪಂಚಾಯತ್ ಸದಸ್ಯರಾಗಿ, ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾಗಿದ್ದರು. ಪಜೀರು ಗ್ರಾಮಪಂಚಾಯತ್‌ನ ಪಾಣೆಲ ವಾರ್ಡ್‌ನಿಂದ 1994 ರಿಂದ 2003ರವರೆಗೆ ಪಂಚಾಯತ್ ಸದಸ್ಯರಾಗಿದ್ದ ಅವರು, 2010ರಿಂದ 2015ರವರೆಗೆ ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯರಾಗಿ ಚುನಾಯಿತರಾಗಿದ್ದರು.

ಕಳೆದ ಹಲವಾರು ವರ್ಷಗಳಿಂದ ಬಿಜೆಪಿ ಪಕ್ಷದ ಹಲವು ಜವಬ್ಧಾರಿಗಳನ್ನು ವಹಿಸಿ ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಅವಧಿಯಲ್ಲಿ ಕುರ್ನಾಡು ಕ್ಷೇತ್ರದಲ್ಲಿ ದ್ರವತ್ಯಾಜ್ಯ ಘಟಕ, ಕಿಂಡಿಅಣೆಕಟ್ಟುಗಳು, ರಸ್ತೆ ನಿರ್ಮಾಣ, ನೀರು ಸರಬರಾಜು ಯೋಜನೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಯನ್ನು ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News