ಮಾಂಟೆಕಾರ್ಲೊ ಮಾಸ್ಟರ್ಸ್: ನಡಾಲ್ ಸೆಮಿ ಫೈನಲ್‌ಗೆ

Update: 2018-04-20 18:38 GMT

ಮಾಂಟೆೆಕಾರ್ಲೊ, ಎ.19: ವಿಶ್ವದ ನಂ.1 ಆಟಗಾರ ರಫೆಲ್ ನಡಾಲ್ ಮಾಂಟೆೆಕಾರ್ಲೊ ಮಾಸ್ಟರ್ಸ್ ಟೆನಿಸ್ ಟೂರ್ನಿಯಲ್ಲಿ ಸೆಮಿ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.

ಇಲ್ಲಿ ಶುಕ್ರವಾರ ನಡೆದ ಪುರುಷರ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ನಡಾಲ್ ಆಸ್ಟ್ರೀಯದ ಡೊಮಿನಿಕ್ ಥೀಮ್‌ರನ್ನು 6-0, 6-2 ನೇರ ಸೆಟ್‌ಗಳಿಂದ ಸೋಲಿಸಿದ್ದಾರೆ. ಈ ಮೂಲಕ 11ನೇ ಪ್ರಶಸ್ತಿ ಗೆಲ್ಲುವತ್ತ ಹೆಜ್ಜೆ ಇಟ್ಟಿದ್ದಾರೆ. ಇಲ್ಲಿ ಗುರುವಾರ ನಡೆದ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸ್ಪೇನ್ ಆಟಗಾರ ನಡಾಲ್ ರಶ್ಯದ ಕರೆನ್ ಖಚನೊವ್ ವಿರುದ್ಧ 6-3, 6-2 ನೇರ ಸೆಟ್‌ಗಳಿಂದ ಜಯ ಸಾಧಿಸಿದ್ದರು. ಐದನೇ ಶ್ರೇಯಾಂಕದ ಥೀಮ್ ಪ್ರಿ-ಕ್ವಾರ್ಟರ್ ಫೈನಲ್‌ನಲ್ಲಿ ಜೊಕೊವಿಕ್‌ರನ್ನು 6-7(2/7), 6-2, 6-3 ನೇರ ಸೆಟ್‌ಗಳಿಂದ ಸೋಲಿಸಿ ಶಾಕ್ ನೀಡಿದ್ದರು.

ನಡಾಲ್ ಮುಂದಿನ ಸುತ್ತಿನಲ್ಲಿ ಗ್ರಿಗೊರ್ ಡಿಮಿಟ್ರೊವ್‌ರನ್ನು ಎದುರಿಸಲಿದ್ದಾರೆ. ಡಿಮಿಟ್ರೊವ್ ಬಲ್ಗೇರಿಯದ ಡೇವಿಡ್ ಗಫಿನ್‌ರನ್ನು 6-4, 7-6(7/5) ಸೆಟ್‌ಗಳಿಂದ ಸೋಲಿಸಿ ಮೊದಲ ಬಾರಿ ಮಾಂಟೆಕಾರ್ಲೊ ಮಾಸ್ಟರ್ಸ್‌ನಲ್ಲಿ ಸೆಮಿ ಫೈನಲ್‌ಗೆ ತಲುಪಿದ್ದಾರೆ. ವಿಶ್ವ ರ್ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಳ್ಳಲು ನಡಾಲ್ 11ನೇ ಮಾಂಟೆಕಾರ್ಲೊ ಪ್ರಶಸ್ತಿಯನ್ನು ಗೆಲ್ಲಲೇಬೇಕಾಗಿದೆ. 16 ಬಾರಿಯ ಗ್ರಾನ್‌ಸ್ಲಾಮ್ ಚಾಂಪಿಯನ್ ನಡಾಲ್ ದಾಖಲೆ 31ನೇ ಮಾಸ್ಟರ್ಸ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News