ಉಡುಪಿ: ಸರ್ವ ಧರ್ಮಗಳ ಮುಖಂಡರಿಂದ ಮೌನ ಧರಣಿ
Update: 2018-04-21 20:29 IST
ಉಡುಪಿ, ಎ.21: ಕಥುವಾ ಬಾಲಕಿ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ವನ್ನು ಖಂಡಿಸಿ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಉಡುಪಿ ಜಿಲ್ಲೆಯ ಸರ್ವಧರ್ಮಗಳ ಮುಖಂಡರು ವೌನ ಧರಣಿಯನ್ನು ನಡೆಸಿದರು.
ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ದೇಶದ ಪ್ರಜ್ಞಾವಂತ ನಾಗರಿಕರನ್ನು ತಲೆ ತಗ್ಗಿಸುವಂತೆ ಮಾಡಿದ್ದು, ಈ ಪ್ರಕರಣದ ಆರೋಪಿಗಳನ್ನು ಕೂಡಲೇ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಗುಲಾಂ ಮುಹಮ್ಮದ್, ದೇವಿಪ್ರಸಾದ್ ಶೆಟ್ಟಿ, ಹಾಜಿ ಅಬೂಬಕ್ಕರ್ ಪರ್ಕಳ, ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಅಬ್ದುಲ್ ಅಝೀಜ್ ಹೆಜಮಾಡಿ, ಟಿ.ಎಂ.ರೆಹಮತುಲ್ಲಾ, ಮುಹಮ್ಮದ್ ಫಾರೂಕ್ ಮೊದಲಾದವರು ಉಪಸ್ಥಿತರಿದ್ದರು.