ಉಡುಪಿ ಜಿಲ್ಲೆ: ಆರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಉಡುಪಿ, ಎ.21: ರಾಜ್ಯ ವಿಧಾನಸಭಾ ಚುನಾವಣೆಗೆ ನಾಲ್ಕನೆ ದಿನವಾದ ಇಂದು ಉಡುಪಿ ಜಿಲ್ಲೆಯಲ್ಲಿ ಒಟ್ಟು ಆರು ಮಂದಿ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಿದರು.
ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ಎಂ. ಸುಕುಮಾರ ಶೆಟ್ಟಿ, ಕುಂದಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಕೇಶ್ ಮಲ್ಲಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ರಾಕೇಶ್ ಮಲ್ಯ, ಉಡುಪಿ ಕ್ಷೇತ್ರ ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶಿರೂರು ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ, ಕಾಪು ಕ್ಷೇತ್ರದಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನುಪಮಾ ಶೆಣೈ, ಕಾರ್ಕಳ ಕ್ಷೇತ್ರದಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಉದಯ ಕುಮಾರ್ ನಾಮಪತ್ರ ಸಲ್ಲಿಸಿದರು.
ಈವರೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 15 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಎ. 24 ಹಾಗೂ ನಾಮಪತ್ರ ಹಿಂಪಡೆಯಲು ಎ.27 ಕೊನೆಯ ದಿನಾಂಕವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.