ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದೆ ನನ್ನ ಗುರಿ: ಬೇಳೂರು ಗೋಪಾಲಕೃಷ್ಣ

Update: 2018-04-21 16:18 GMT

ಬೆಂಗಳೂರು, ಎ.21: ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ್ದ ಹಿನ್ನೆಲೆಯಲ್ಲಿ ಬೇಳೂರು ಗೋಪಾಲಕೃಷ್ಣ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ತೀರ್ಮಾನಿಸಿದ್ದಾರೆ.

ಶನಿವಾರ ನಗರದಲ್ಲಿ ಮುಖ್ಯಮಂತ್ರಿಯ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನಾನು ಯಾವುದೇ ಷರತ್ತು ವಿಧಿಸದೆ ನಾಳೆ ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ. ಈ ಸಂಬಂಧ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜೊತೆ ಮಾತನಾಡಿದ್ದೇನೆ ಎಂದು ಅವರು ಹೇಳಿದರು.

ಬೇಳೂರು ಎಂದರೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಭಯವಿದೆ. ಯಡಿಯೂರಪ್ಪ ಹಾಗೂ ಅವರ ಮಗ ನನಗೆ ಟಿಕೆಟ್ ತಪ್ಪಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಯಾವುದೆ ರೀತಿಯ ಸಮೀಕ್ಷೆ ಮಾಡಿಲ್ಲ. ಯಡಿಯೂರಪ್ಪರದ್ದು ಬೋಗಸ್ ಸಮೀಕ್ಷೆ ಅಷ್ಟೇ. ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದೆ ನನ್ನ ಗುರಿ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲದೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆಯೂ ಬೇಳೂರು ಗೋಪಾಲಕೃಷ್ಣ ಚರ್ಚೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News