ಉತ್ತರಪ್ರದೇಶ: 14 ವರ್ಷದ ಬಾಲಕಿಯ ಅತ್ಯಾಚಾರ: ಇಬ್ಬರ ಬಂಧನ

Update: 2018-04-21 16:08 GMT

ಕೌಸಂಬಿ, ಎ. 21: ಇಲ್ಲಿನ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯೋರ್ವರು ಬಾಲಕಿಗೆ ಆಮಿಷವೊಡ್ಡಿ ನಿರ್ಜನ ಸ್ಥಳವೊಂದಕ್ಕೆ ಕರೆದೊಯ್ದು ಯುವಕರಿಗೆ ಹಸ್ತಾಂತರಿಸಿದ್ದರು. ಈ ಯುವಕರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಪೊಲೀಸ್ ಅಧೀಕ್ಷಕ ಪ್ರತಾಪ್ ಕುಮಾರ್ ಗುಪ್ತಾ ಹೇಳಿದ್ದಾರೆ.

ಸಂತ್ರಸ್ತೆಯ ಕುಟುಂಬ ನೀಡಿದ ದೂರಿನ ಆಧಾರದಲ್ಲಿ ಪ್ರಥಮ ಮಾಹಿತಿ ವರದಿ ದಾಖಲಿಸಲಾಗಿದೆ. ಆರೋಪಿಗಳನ್ನು ಬಬ್ಲೂ ಪ್ರಜಾಪತಿ, ಬೈಯಾನ್ ಎಂದು ಗುರುತಿಸಲಾಗಿದೆ. ಸಹಕರಿಸಿದ ಮಹಿಳೆಯನ್ನು ಸವಿತಾ ಪ್ರಜಾಪತಿ ಎಂದು ಗುರುತಿಸಲಾಗಿದೆ ಎಂದು ಗುಪ್ತಾ ತಿಳಿಸಿದ್ದಾರೆ.

ಈ ಮೂವರನ್ನು ಬಂಧಿಸಲಾಗಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ ಎಂದು ಪ್ರತಾಪ್ ಕುಮಾರ್ ಗುಪ್ತಾ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News