ಮತದಾನ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಕಾಪಶಿ
ಉಡುಪಿ, ಎ.21: ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದರ ಕುರಿತು ಸಮೀಪದ ಬಿಎಲ್‌ಒ ಅವನ್ನು ಸಂಪರ್ಕಿಸಿ ತಮ್ಮ ಹೆಸರನ್ನು ಖಾತರಿ ಪಡಿಸಿಕೊಂಡು ಮೇ12ರಂದು ನಡೆಯುವ ಚುನಾವಣೆಯಲ್ಲಿ ಪ್ರತಿಯೊ ಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದು ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಹೇಳಿದ್ದಾರೆ.
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಲ್ಪೆಮೀನುಗಾರಿಕಾ ಬಂದರಿನಲ್ಲಿ ಶನಿವಾರ ಮೀನುಗಾರರಿಗಾಗಿ ಏರ್ಪಡಿಸಿದ್ದ ಮತದಾನ ಕುರಿತು ಜಾಗೃತಿ ಜಾಥಾ ಹಾಗೂ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಮತದಾರರು ಯಾವುದೇ ಆಸೆ, ಆಮಿಷ, ಒತ್ತಡ, ಪ್ರಲೋಭನೆಗಳಿಗೆ ಒಳಗಾಗದೆ ತಮ್ಮ ಸ್ವಂತ ವಿವೇಚನೆಯನ್ನು ಬಳಸಿ ಯೋಗ್ಯ ಅಭ್ಯರ್ಥಿಗೆ ಮತದಾನ ಮಾಡಬೇಕು. ಈ ಬಾರಿ ಚುನಾವಣಾ ಆಯೋಗ ಮತದಾನದ ಅವಧಿಯನ್ನು ಬೆಳಗ್ಗೆ 7 ರಿಂದ ಸಂಜೆ 6 ರ ವರೆಗೆ ವಿಸ್ತರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ವಿವಿ ಪ್ಯಾಟ್ ಯಂತ್ರದ ಕುರಿತು ಪ್ರಾತ್ಯಕ್ಷಿಕೆ ನೀಡ ಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭುಜಬಲಿ, ಜಿಲ್ಲಾ ವಿಕಲಚೇತನ ಇಲಾಖೆ ಅಧಿಕಾರಿ ನಿರಂಜನ ಭಟ್ ಉಪಸ್ಥಿತರಿದ್ದರು.
ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಪಾರ್ಶ್ವನಾಥ್ ಸ್ವಾಗತಿಸಿ, ವಂದಿಸಿದರು