ಎ.30: ಶಬೇ ಬರಾಅತ್
Update: 2018-04-21 22:21 IST
ಮಂಗಳೂರು, ಎ. 21: ಶಾಬಾನ್‌ನ ಪ್ರಥಮ ಚಂದ್ರದರ್ಶನವು ಎ.16ರಂದು ಕೇರಳದ ಪೊನ್ನಾನಿಯಲ್ಲಿ ಆದ ಬಗ್ಗೆ ವಿಶ್ವಾಸಾರ್ಹ ಮೂಲಗಳಿಂದ ತಿಳಿದು ಬಂದ ಕಾರಣ ಎ.30ರ ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ಶಬೇ ಬರಾಅತ್ ಆಗಿರುತ್ತದೆ ಎಂದು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಪ್ರಕಟಿಸಿದ್ದಾರೆ ಎಂದು ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ತಿಳಿಸಿದ್ದಾರೆ.